ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಮಾತ್ರ ಕೋವಿಡ್ ಕೇಸ್ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ನಿಯಂತ್ರಣದಲ್ಲಿದೆ. ಯಾವುದೇ ಮಾರ್ಗಸೂಚಿ ಜಾರಿಗೆ ತಂದರೂ ಇದೀ ರಾಜ್ಯಕ್ಕೆ ಅನ್ವಯವಾಗುವಂತೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ಬಗ್ಗೆ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಚರ್ಚಿಸಿ ಮಾರ್ಗಸೂಚಿ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಇಂದು ನಡೆಯಲಿರುವ ಅನೌಪಚಾರಿಕ ಸಭೆಯಲ್ಲಿ ನವೆಂಬರ್ ನಲ್ಲಿ ಕೋವಿಡ್ ಸ್ಥಿತಿಗತಿ ಕುರುತು ಮಾಹಿತಿ ಪಡೆಯಲಾಗುವುದು. ಕೋವಿಡ್ ನಿಯಂತ್ರಣಕ್ಕೆ ಏನೆಲ್ಲ ಕೈಗೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಲುತ್ತೇವೆ. ಸಧ್ಯಕ್ಕೆ ಯಾರೂ ಆತಂಕಪಡಬೇಕಿಲ್ಲ. ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಬೇಕು. ಮಾಸ್ಕ್, ದೈಹಿಕ ಅಂತರ ಪಾಲನೆ ಮುಖ್ಯ. ಹೊಸ ವರ್ಷಾಚರಣೆ ಬಗ್ಗೆ ಯಾವುದೇ ನಿರ್ಧಾರ ಮಾಡಲಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮತ್ತೋರ್ವ ಒಮಿಕ್ರಾನ್ ಸೋಂಕಿತ ನಾಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ