ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಎಂಬ ರೂಪಾಂತರಿ ವೈರಸ್ ಎಂಟ್ರಿಯಾಗಿದೆಯೇ ಎಂಬ ಆತಂಕದ ನಡುವೆ ಡೆಲ್ಟಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಒಮಿಕ್ರಾನ್ ತಳಿ ಬಂದಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಈಗಿರುವ ಡೆಲ್ಟಾ ತಳಿ ಪ್ರಕರಣ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಎರಡನ್ನೂ ಕೂಡ ನಿಭಾಯಿಸಬೇಕು. ಹೆಚ್ಚಿನ ಮಾಹಿತಿ ಪಡೆಯಲು ಎನ್ ಸಿಬಿಎಸ್ ಗೆ ಕಳುಹಿಸುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದರು.
ಕ್ಲಸ್ಟರ್ ಇರುವ ಕಡೆ ಹೆಚ್ಚಿನ ಗಮನ ಕೊಡಲಾಗುತ್ತಿದೆ. ಕೊರೊನಾ ಲಸಿಕೆ ನೀಡಿಕೆಯನ್ನು ಹೆಚ್ಚಳ ಮಾಡುತ್ತೇವೆ. ಟೆಸ್ಟಿಂಗ್, ಟ್ರ್ಯಾಕಿಂಗ್ ಹೆಚ್ಚಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಪ್ರಶ್ನೆ ಉದ್ಭವಿಸಲ್ಲ. ಜನ ಜೀವನ ಹೀಗೆಯೇ ಸಾಗಲಿದೆ. ಆದರೆ ಜನರು ಗುಂಪು ಸೇರುವುದನ್ನು ನಿಲ್ಲಿಸಬೇಕು. ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಜಾಗೃತರಾಗಬೇಕು ಎಂದು ಹೇಳಿದರು.
ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಸೋಂಕು ಪತ್ತೆ ; ಸಚಿವ ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ