Latest

ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆಗಳು ಆಗುತ್ತೆ; ‘ಆಪರೇಷನ್ ಕಮಲ’ ಪ್ಲಾನ್ ಸ್ಪಷ್ಟಪಡಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಹಲವು ಚಟುವಟಿಕೆಗಳು ಗರಿಗೆದರಿದ್ದು, ದೊಡ್ಡ ಪ್ರಮಾಣದಲ್ಲಿ ಆಪರೇಷನ್ ಕಮಲ ನಡೆಸಲು ಕಮಲ ಪಾಳಯ ಸಿದ್ಧತೆ ನಡೆಸಿದಂತಿದೆ.

ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜಕಾರಣದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಹಳೇ ಮೈಸೂರು ಭಾಗದಲ್ಲಿ ಬೇರೆ ಪಕ್ಷದ ನಾಯಕರು ಬಿಜೆಪಿ ಸೇರುವುದು ಸಹಜ ಬೆಳವಣಿಗೆ. ನೋಡೋಣ ಮುಂದೆ ಏನಾಗುತ್ತದೆ ಎಂದು ಹೇಳುವ ಮೂಲಕ ಆಪರೇಷನ್ ಕಮಲ ಕುರಿತು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದ ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಷ್ ಸೇರಿದಂತೆ ಹಲವು ಘಟಾನುಘಟಿ ನಾಯಕರನ್ನು ಬಿಜೆಪಿಗೆ ಸೆಳೆಯಲು ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ವಿಧಾನ ಪರಿಷತ್, ರಾಜ್ಯ ಸಭೆ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ. ನಾಳೆ ಅಥವಾ ನಾಡಿದ್ದು ಹೈಕಮಾಂಡ್ ಜತೆ ಚರ್ಚಿಸಲಿದ್ದೇನೆ. ಈ ವೇಳೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಗಮನ ಹರಿಸುತ್ತಾರೆ ಅವರು ಕೈಗೊಳ್ಳುವ ತೀರ್ಮಾನದ ಮೇಲೆ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ದಕ್ಷ, ಜನಪರ ಆಡಳಿತ ಮಾಡುವುದು ಬಹಳ ಮುಖ್ಯ. ಆಜಾನ್, ಹಿಜಾಬ್, ಹಲಾಲ್ ವಿಷಯಗಳನ್ನು ಸೌಹಾರ್ದ ಯುತವಾಗಿ, ಕಾನೂನಾತ್ಮಕವಾಗಿ ಬಗೆಹರಿಸಲಾಗಿದೆ. ನ್ಯಾಯ ಸಮ್ಮತವಾಗಿ ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯ ನೀಡಿರುವ ಆದೇಶದಂತೆ ಕ್ರಮ ವಹಿಸಿದೆ. ಅದರ ಚೌಕಟ್ಟಿನಲ್ಲಿ ದಕ್ಷವಾಗಿ ನಿಭಾಯಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನು ಮಾಡಿ ಸಚಿವ ಸ್ಥಾನ ನೀಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಇವೆಲ್ಲವೂ ವರಿಷ್ಠ ರಿಗೆ ಬಿಟ್ಟಿದ್ದು ಎಂದರು.

ವಾಹನ ಚಾಲನೆ ವೇಳೆಯೇ ಮೂರ್ಛೆ ಹೋದ ಟೆಂಪೋ ಚಾಲಕ; ಮುಂದೇನಾಯ್ತು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button