ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದಲ್ಲಿಯೇ ಹನಿಟ್ರ್ಯಾಪ್ ಆರೋಪ ಕೇಳಿಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪಿಎ ಹರೀಶ್ ಅವರನ್ನು ವಿಧಾನಸೌಧದಲ್ಲಿ ಡಿ ದರ್ಜೆ ನೌಕರಸ್ತೆಯೊಬ್ಬರು ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಿಎಂ ಬೊಮ್ಮಾಯಿ ಅವರ ಪಿಎ ಹರೀಶ್ ಅವರನ್ನು ಹನಿಟ್ರ್ಯಾಪ್ ಮಾಡಿ ಮಹತ್ವದ ದಾಖಲೆಗಳನ್ನು ಪಡೆಯಲಾಗಿದೆ ಎಂದು ಜನ್ಮ ಭೂಮಿ ಫೌಂಡೇಷನ್ ಅಧ್ಯಕ್ಷ ನಟರಾಜ್ ಶರ್ಮಾ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
ವಿಧಾನಸೌಧದಲ್ಲಿ ಡಿ ದರ್ಜೆ ನೌಕರಿ ಮಾಡುತ್ತಿರುವ ಮಹಿಳೆ ಮೊದಲು ಪಿಎ ಹರೀಶ್ ಗೆ ಪರಿಚಯವಾಗಿ ಸಲುಗೆ ಬೆಳೆಸಿಕೊಂಡಿದ್ದಾಳೆ. ನಂತರ ಹನಿಟ್ರ್ಯಾಪ್ ಮಾಡಿರುವುದೂ ಅಲ್ಲದೇ ಬ್ಲ್ಯಾಕ್ ಮೇಲ್ ಮಾಡಿ ಹಣ ಹಾಗೂ ಸರ್ಕಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪಡೆದು ದಾಖಲೆಗಳನ್ನು ವಿಪಕ್ಷಗಳಿಗೆ ನೀಡಿರುವ ಅನುಮಾನವಿದೆ. ಈ ಪ್ರಕರಣದ ಹಿಂದೆ ದೊಡ್ಡ ಜಾಲವೇ ಇದೆ ಈ ಬಗ್ಗೆ ತನಿಖೆ ನಡೆಸಬೇಕು ಎಂದು ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
ವೋಟರ್ ಐಡಿ ಅಕ್ರಮ ಪ್ರಕರಣ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
https://pragati.taskdun.com/voter-id-misuse-scam4-accusedarrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ