ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದಿನದಿಂದ ದಿನಕ್ಕೆ ಕಾವೇರಿದ ಚರ್ಚೆ ನಡೆಯುತ್ತಿದ್ದು, ಆಡಳಿತ ಪಕ್ಷ ಬಿಜೆಪಿ- ವಿಪಕ್ಷ ಕಾಂಗ್ರೆಸ್ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆಯೇ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅಹತ್ವ ಪಡೆದುಕೊಂಡಿದೆ.
ನವದೆಹಲಿಯ ಪ್ರಧಾನಿ ಮೋದಿ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತ ಚರ್ಚೆ, ಉಪಚುನಾವಣೆ ಫಲಿತಾಂಶ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು. ಈ ವೇಳೆ ಬಿಟ್ ಕಾಯಿನ್ ವಿಚಾರ, ಉಪಚುನಾವಣೆ ಫಲಿತಾಂಶ, ಹಾನಗಲ್ ಕ್ಷೇರದಲ್ಲಿ ಬಿಜೆಪಿ ಸೋಲು, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ – ತಂಗಡಗಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ