Latest

ಕರಾವಳಿ ಅಭಿವೃದ್ಧಿಗೆ ಶಕ್ತಿ ತುಂಬಲಿರುವ ಪ್ರಧಾನಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವಾಗ ಹಲವಾರು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. 3800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.

ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳಾಗಿದ್ದು, ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ ಹಾಗೂ ಉದ್ಯೋಗವನ್ನು ವೃದ್ಧಿಸುವ ಯೋಜನೆಗಳಾಗಿವೆ. ಕರ್ನಾಟಕಕ್ಕೆ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜೂರು ಮಾಡಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವೂ ಹಲವಾರು ಯೋಜನೆಗಳನ್ನು ಈ ಭಾಗಕ್ಕೆ ಜಾರಿ ಮಾಡಿದ್ದು ಈ ಎಲ್ಲಾ ಯೋಜನೆಗಳಿಗೆ ಇಂದು ಚಾಲನೆ ದೊರೆಯಲಿದೆ ಎಂದರು.

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

https://pragati.taskdun.com/latest/pm-narendra-modimangalorevisit-2/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button