ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಎಲ್ಲ ಶಾಸಕರು ಸಚಿವರಾಗಲು ಆಗದು. ಇದು ನಮ್ಮ ಶಾಸಕರಿಗೂ ಗೊತ್ತಿರುವ ವಿಚಾರ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಯತ್ನ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದೆಹಲಿಗೆ ಬಂದ ಶಾಸಕರ ಜೊತೆಯೂ ಚರ್ಚಿಸಿದ್ದೇನೆ. ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ. ಪ್ರಾದೇಶಿಕ ಸಮತೋಲನ ಕಾಪಾಡಬೇಕು. ಹಿಂದೆ ಸಂಪುಟದಲ್ಲಿ ಸ್ಥಾನ ಪಡೆದವರ ಬಗ್ಗೆಯೂ ಚರ್ಚೆಯಿದೆ. ಎಲ್ಲವನ್ನೂ ನಿರ್ಧರಿಸಿ ಬ್ಯಾಲೆನ್ಸ್ ಸಂಪುಟ ರಚನೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಎಷ್ಟು ಡಿಸಿಎಂ ಇರಬೇಕು. ಸಂಪುಟ ರಚನೆಗೆ ಯಾವ ಸೂತ್ರ ಪಾಲಿಸಬೇಕು ಎಷ್ಟು ಹಂತದಲ್ಲಿ ಸಂಪುಟ ರಚನೆಯಾಗಬೇಕು ಎಂಬ ಹಲವು ವಿಚಾರಗಳ ಬಗ್ಗೆ ವರಿಷ್ಠರ ಭೇಟಿಯಾಗಿ ಚರ್ಚಿಸುತ್ತೇನೆ.ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಸಂಸತ್ ಭವನಕ್ಕೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುತ್ತೇನೆ. ಬಳಿಕ ಜೆ.ಪಿ.ನಡ್ಡಾ ಭೇಟಿಯಾಗಿ ಚರ್ಚಿಸುತ್ತೇನೆ. ಒಟ್ಟಾರೆ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಫೈನಲ್ ಆಗಲಿದ್ದು, ಸಂಜೆ ಅಥವಾ ನಾಳೆ ಅಂತಿಮ ಚಿತ್ರಣ ಸಿಗಲಿದೆ ಎಂದು ಹೇಳಿದರು.
ಸಿಎಂ ಬೊಮ್ಮಾಯಿ ಜೆ.ಪಿ.ನಡ್ಡಾ ಭೇಟಿ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ