Latest

*ಕಾಂಗ್ರೆಸ್ ವಿರುದ್ಧ ಸಿಎಂ ಹಿಗ್ಗಾ ಮುಗ್ಗಾ ವಾಗ್ದಾಳಿ; ಕ್ಷೇತ್ರ ಬದಲಾವಣೆ ಬಗ್ಗೆ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಮೂಲಕ ಅಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಚುನವಣಾ ಮಾಧ್ಯಮ ಕೇಂದ್ರ ಉದ್ಘಾಟಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಾವು ಮಾಡಿದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಜನರ ಬಳಿ ಮತ ಕೆಳುತ್ತೇವೆ. ಎಸ್ಸಿ ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆ. ಶೆಡ್ಯೂಲ್ 9ರಡಿ ಸೇರಿಸಲು ಶಿಫಾರಸು ಮಾಡಿದ್ದೇವೆ. ರಾಜ್ಯದ ಉದ್ದಗಲಕ್ಕೂ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೋವಿಡ್ ಹಾಗೂ ಪ್ರವಾಹದ ಸಂದರ್ಭದಲ್ಲಿಯೂ ಅಭಿವೃದ್ಧಿ ಕುಂಠಿತವಾಗಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ನೀಡುವ ನಿಟ್ಟಿನಲ್ಲಿ ಶ್ರಮಿಸಿದ್ದೇವೆ ಎಂದರು.

ಕಾಂಗ್ರೆಸ್ ನ ದುರಾಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡುತ್ತೇವೆ. ಕಾಂಗ್ರೆಸ್ ನವರು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾವು ಧರ್ಮ ಜೋಡಣೆ ಕೆಲಸ ಮಾಡುತ್ತಿದ್ದೇವೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50ಕ್ಕೂ ಹೆಚ್ಚು ಹಗರಣಗಳು ನಡೆದಿದ್ದವು. ಭ್ರಷ್ಟಾಚಾರದ ಜೊತೆ ನಮ್ಮ ಸರ್ಕಾರ ರಾಜೀ ಪ್ರಶ್ನೆಯೇ ಇಲ್ಲ, ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕ್ಷೇತ್ರ ಬದಲಾವಣೆ ಗೊಂದಲದ ವಿಚರವಾಗಿ ಮಾತನಾಡಿದ ಸಿಎಂ, ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

https://pragati.taskdun.com/karnatakarain-updateimd/

Related Articles

Back to top button