ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಅತಿ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದ್ದಾರೆ. ರಾಹುಲ್ ಹೇಳಿಕೆಗೆ ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ತಿರುಗೇಟು ನೀಡಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ, ಅತಿ ಭ್ರಷ್ಟಾಚಾರದ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದ ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಗಾಂಧಿ ಜಯಂತಿಯಂದು ನಕಲಿ ಗಾಂಧಿಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಕೌಂಟರ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಕಲಿ ಗಾಂಧಿಗಳ ಹೇಳಿಕೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಆರೋಪಿಸಲು ಅವರಿಗೆ ಯಾವ ಹಕ್ಕಿದೆ. ಇಡೀ ಕಾಂಗ್ರೆಸ್ ಪಕ್ಷ ಇಂದು ಬೇಲ್ ಮೇಲೆ ಹೊರಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಿಂದ ಹಿಡಿದು ರಾಜ್ಯದಲ್ಲಿನ ಕೆಪಿಸಿಸಿ ಅಧ್ಯಕ್ಷರವರೆಗೂ ಜಾಮೀನಿನ ಮೇಲೆ ಹೊರಗಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯದ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಇದ್ದಾರೆ. ಹೀಗಿರುವಾಗ ಬಿಜೆಪಿ ಸರ್ಕಾರದ ಬಗ್ಗೆ ಇವರು ಮಾಡುವ ಆರೋಪ ಹಾಸಾಸ್ಪದ. ನಮ್ಮ ಸರ್ಕಾರ ಯಾವುದೇ ಭ್ರಷ್ಟಾಚಾರ ನಡೆಸಿಲ್ಲ. ಕಾಂಗ್ರೆಸ್ ನಾಯಕರು ಮಾಡುಇವ ಆರೋಪಕ್ಕೆ ದಾಖಲೆಗಳಿದ್ದರೆ ಕೊಡಲಿ ಎಂದು ಹೆಳಿದರು.
ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಎಟಿಎಂ ಆಗಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯವನ್ನೇ ಲೂಟಿ ಮಾಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಕ್ಕೆ ಅವರ ಬಳಿ ದಾಖಲೆ ಇದ್ದರೆ ಕೊಡಲಿ. ತಕ್ಷಣ ತನಿಖೆ ಮಾಡಿಸುತ್ತೇನೆ ಎಂದು ಹೇಳಿದರು.
ಶಿಕ್ಷಕರ ನೇಮಕಾತಿ ಅಕ್ರಮ; ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿ
https://pragati.taskdun.com/latest/teachers-recruitment-illigal-casecidenquiry/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ