Latest

ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ನವದಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ದೆಹಲಿಯ ಕರ್ನಾಟಕ ಭವನದಲ್ಲಿ ರಮೇಶ್ ಜಾರಕಿಹೊಳಿ ಸಿಎಂ ಭೇಟಿಯಾಗಿದ್ದು, ಕೆಲ ಕಾಲ ಮಾತುಕತೆ ನಡೆಸಿದರು. ಅಮಿತ್ ಶಾ ಭೇಟಿಗೂ ಮೊದಲು ಸಿಎಂ ಜತೆ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಮೇಶ್, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಈ ಬಾರಿ ದೆಹಲಿ ಭೆಟಿ ವೇಳೆಯೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಕಾರಣ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೂನ್ 10ರ ಬಳಿಕ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.
ಅಮಿತ್ ಶಾ ಭೇಟಿಯಾಗಿಲ್ಲ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ ಎಂದ ಸಿಎಂ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button