Latest

ವಿಪಕ್ಷಗಳು ಧೂಳಿಪಟ; ನವ ಭಾರತ ನಿರ್ಮಾಣ ಕನಸು ಜನರಿಂದಲೇ ಅನುಷ್ಠಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದ ಕಾರ್ಯಕ್ರಮಗಳು ಜನರಿಗೆ ತಲುಪಿವೆ. ಮೋದಿಯವರನ್ನು ದೇಶದ ಉದ್ದಗಲಕ್ಕೂ ಜನ ಮೆಚ್ಚಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಮೂಲಕ ಜನರು ವಿಪಕ್ಷವನ್ನು ಧೂಳಿಪಟ ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಈ ಮೂಲಕ ನವ ಭಾರತ ನಿರ್ಮಾಣ ಕನಸು ಅನುಷ್ಠಾನವಾಗುತ್ತಿದೆ. ಭಾರತದ ಉದ್ದಗಲಕ್ಕೂ ಪ್ರಧಾನಿ ಮೋದಿ ಜನ ಮೆಚ್ಚಿದ ನಾಯಕ ಎಂಬುದು ಸಾಬೀತಾಗಿದೆ ಎಂದು ಹೇಳಿದರು.

ಎಲ್ಲಾ ಮತದಾರರಿಗೂ ಧನ್ಯವಾದ ಹೇಳುತ್ತೇನೆ. 5 ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದ ವಿಧಾನಸಭಾ ಚುನಾವಣೆ ಮೇಲೂ ಸಕಾರಾತ್ಮಕ ಪರಿಣಾಮ ಬೀರಲಿದೆ. 2023ರಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿತ್ತಿದೆ ಎಂದರು.

ಏಪ್ರಿಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

ಎರಡು ರಾಜ್ಯಗಳಲ್ಲಿ ಅತಂತ್ರ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button