ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಜಾನ್ ಹಾಗೂ ಮೈಕ್ ಬ್ಯಾನ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಆದೇಶವಿದೆ. ಆ ಪ್ರಕಾರ ಸೂಚನೆ ಕೊಟ್ಟಿದ್ದೇವೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಸೌಂಡ್ ಬಳಸಬೇಕು ಎಂಬ ಬಗ್ಗೆ ನಿಯಮವಿದ್ದು, ಅದರಂತೆ ಆದೇಶ ಪಾಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಆಯಾ ಸ್ಥಳಗಳಲ್ಲಿ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ, ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಲಾಗಿದೆ. ಕಾನೂನನ್ನು ಎಲ್ಲರೂ ಪರಿಪಾಲನೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಶಿವಮೊಗ್ಗದ ಏರ್ ಪೋರ್ಟ್ ಗೆ ಯಡಿಯೂರಪ್ಪನವರ ಹೆಸರಿಡಲು ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಅಸಮಾಧಾನ ಹೊರಹಾಕಿದ್ದಾರೆ ಎಂಬ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ, ಅಂತಹ ಯಾವುದೇ ಸಮಸ್ಯೆಗಳು ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದರು.
ಚಿನ್ನ-ಬೆಳ್ಳಿ ದರ ಇಂದು ಯಾವ ನಗರದಲ್ಲಿ ಎಷ್ಟಿದೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ