Latest

ಆಜಾನ್ ವಿವಾದ; ಸುಪ್ರೀಂ ಕೋರ್ಟ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಸಿಎಂ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಎಲ್ಲರಿಗೂ ಅನ್ವಯವಾಗುತ್ತದೆ. ಅದನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಆರಂಭವಾಗಿರುವ ಆಜಾನ್ V/S ಸುಪ್ರಭಾತ ಅಭಿಯಾನ ವಿಚಾರವಾಗಿ, ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಸೌಹಾರ್ಧಯುತವಾಗಿ ಆದೇಶ ಪಾಲಿಸಬೇಕು. ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೂ ಸೂಚಿಸಿದ್ದೇನೆ ಎಂದರು.

ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಮತ್ತೊಮ್ಮೆ ಆದೇಶ ನೀಡುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಸುದೀರ್ಘ ಸಭೆ ನಡೆಸಲಾಗಿದ್ದು, ರಾಜ್ಯದ, ಜಿಲ್ಲಾ ಆಡಳಿತವನ್ನು ಯಾವ ರೀತಿಯಲ್ಲಿ ಅಭಿವೃದ್ಧಿಗೊಳಿಸಬೇಕು ಎಂಬ ಬಗ್ಗೆ ತಿಳಿಸಲಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪುವಂತೆ ಧಕ್ಷತೆಯಿಂದ ಸಮಯಕ್ಕನುಗುಣವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಲು ಸೂಚಿಸಿದ್ದೆನೆ. ಜನರ ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಲಾಗಿದೆ ಎಂದು ಹೇಳಿದರು.

Home add -Advt

ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು: ಹೊಸ ವಿವಾದ ಸೃಷ್ಟಿಸಿದ ಬಿ.ಕೆ.ಹರಿಪ್ರಸಾದ್

ಭೀಕರ ಅಪಘಾತ; 6 ಮಹಿಳೆಯರು ಸೇರಿ 8 ಜನರ ದುರ್ಮರಣ

Related Articles

Back to top button