Kannada NewsKarnataka NewsNationalPolitics
*18 ಸಾವಿರ ಕೋಟಿಯಲ್ಲಿ ನಿರ್ಮಾಣವಾಗಿದ್ದ ಅಟಲ್ ಸೇತುವೆಯಲ್ಲಿ ಬಿರುಕು*

ಪ್ರಗತಿವಾಹಿನಿ ಸುದ್ದಿ: ಈ ವರ್ಷದ ಆರಂಭದಲ್ಲಿ 18 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ನವಿ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಸೇವಾ ಅಟಲ್ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಇಂದು ಸೇತುವೆಯಲ್ಲಿ ಕಾಣಿಸಿಕೊಂಡಿರುವ ಬಿರುಕುಗಳನ್ನು ಪರಿಶೀಲಿಸಲು ಭೇಟಿ ನೀಡಿದ್ದರು.
ಅಟಲ್ ಬಿಹಾರಿ ವಾಜಪೇಯಿ ಸೇವ್ರಿ ನ್ಹವಾ ಶೇವಾ ಅಟಲ್ ಸೇತು, ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. 21.8 ಕಿಮೀ ಉದ್ದದ ಸೇತುವೆಯ 16.5 ಕಿಮೀ ಭಾಗ ಸಮುದ್ರದ ಮೇಲೆ ಇದೆ. ವರದಿಯ ಪ್ರಕಾರ ಈ ಸೇತುವೆಯಲ್ಲಿ ಪ್ರತಿದಿನ 70,000 ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ.
ಇದೀಗ ಬಿರುಕು ಬಿಟ್ಟ ಸೇತುವೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಪಟೋಲೆ, ಈ ಬಿರುಕುಗಳು ಜನರ ಜೀವವನ್ನು ಅಪಾಯಕ್ಕೆ ತಳ್ಳುವಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನಲೆ ಕಾಂಗ್ರೆಸ್ ಕಿಡಿಕಾರಿದೆ.