Latest

ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದ ಸಿ.ಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು, ಇನ್ನೊಂದು ಕ್ಷೇತ್ರದಲ್ಲಿ ಸೋಲು ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದು ತಿಳಿಸಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾದ್ಯಮದವರೊಂದಿಗೆ ಮಾತನಾಡುತ್ತ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಂದಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ ಹಾಗೂ ಮತಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಹಾನಗಲ್ ಸೋಲಿನ ಕುರಿತು ನಾವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದ್ದೇವೆ. ಈ ಅಂತರವನ್ನು ನಾವು ಸಾಧಿಸಬಹುದಾಗಿತ್ತು. ಕಾರಣಗಳನ್ನು ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಿ ಮುಂದೆ ಹೋಗುವ ಕೆಲಸವನ್ನು ಮಾಡುತ್ತೇವೆ ಎಂದರು.

ಹಾನಗಲ್ ನಲ್ಲಿ ದಿ.ಸಿ.ಎಂ.ಉದಾಸಿಯವರಿಗಿದ್ದ ಜನಪ್ರಿಯತೆಯನ್ನು ಸ್ವಲ್ಪಪಟ್ಟಿಗೆ ಮುಂದುವರೆಸಲಾಗಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಜನ ಅವರನ್ನು ಬೆಂಬಲಿಸಿದ್ದಾರೆ ಎಂದರು.

ಸರ್ಕಾರದ 100 ದಿನ:
ಮುಖ್ಯಮಂತ್ರಿಯಾಗಿ 100 ದಿನಗಳಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಒಂದು ವರ್ಷದಂತೆ ಪ್ರಮುಖ ಘಟ್ಟವೇನಲ್ಲ. ಆದರೆ, 100 ದಿನದಲ್ಲಿ ಸರ್ಕಾರದ ದಿಕ್ಕು, ಭರವಸೆ, ಸಮಸ್ಯೆಗಳನ್ನು ಎದುರಿಸಿದ ರೀತಿ, ಇವುಗಳ ಸ್ಥೂಲ ಮಾಹಿತಿ ನೀಡಲಾಗುವುದು ಎಂದರು.

ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಉಪಚುನಾವಣೆ ಫಲಿತಾಂಶ ದಿಕ್ಸೂಚಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ವಿರೋಧ ಪಕ್ಷದವರು ಹಾಗೆ ಹೇಳಬೇಕು. ಸಿಂಧಗಿಯಲ್ಲಿ 31000 ದ ದೊಡ್ಡ ಅಂತರದಿಂದ ಕಾಂಗ್ರೆಸ್ ಸೋತಿದೆ. ಅದಕ್ಕೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ನಿಲ್ಲದ ಅಭಿಮಾನಿಗಳ ಸಾವಿನ ಸರಣಿ; ಪವಸ್ಟಾರ್ ಅಗಲಿಕೆಗೆ ಮತ್ತೋರ್ವ ಅಭಿಮಾನಿ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button