Latest

*2-3 ದಿನಗಳಲ್ಲಿ ಚುನಾವಣಾ ಚಿತ್ರಣವೇ ಬದಲಾಗಲಿದೆ; ಡಿ.ಕೆ.ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನವಿಲ್ಲ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಕಾರ್ಯಕರ್ತರ ಜೊತೆ ಸಂವಾದ ನಡೆಸಿದ್ದು, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಸಂದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. .

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಪ್ರಧಾನಿಯವರು ಕಾರ್ಯಕರ್ತರ ಜೊತೆಗೆ ಸುದೀರ್ಘ ಸಂವಾದ ನಡೆಸಿದರು. ಸಂವಾದದಲ್ಲಿ ಹಲವಾರು ವಿಚಾರ ಹೇಳಿದ್ದಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಬಗ್ಗೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದು, ಮೋದಿಯವರು ಹತ್ತು ಹಲವಾರು ಮಾರ್ಗದರ್ಶನ ಮಾಡಿದ್ದಾರೆ ಎಂದರು.

ಮೋದಿಯವರ ಮಾರ್ಗದ ಅಂಶಗಳನ್ನು ಹಿಡಿದು ರಾಜ್ಯ ಜನತೆ ಮುಂದೆ ಹೋಗುತ್ತೇವೆ. ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದರು.

ಇದೇ ವೇಳೆ ರಕ್ತದಲ್ಲಿ ಬರೆದುಕೊಡುವೆ ಕಾಂಗ್ರೆಸ್ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರ ಕಾಂಗ್ರೆಸ್ ನದ್ದು ಎಂದು ಟಾಂಗ್ ನೀಡಿದರು.

Home add -Advt

150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿ.ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದು ಹೇಳಿದರು.

https://pragati.taskdun.com/vidhanasabha-electioncongresscomplaintbjp/

Related Articles

Back to top button