Kannada NewsLatestUncategorized

*ಈಶ್ವರಪ್ಪ ಬಹಿಷ್ಕಾರ ಹಾಕಿದ್ರಾ ಬೆಳಗಾವಿ ಅಧಿವೇಶನಕ್ಕೆ?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಕ್ಕೆ ಬಂದಿಳಿದ ಸಿಎಂ ಬೊಮ್ಮಾಯಿ ಅವರನ್ನು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಸ್ವಾಗತಿಸಿದರು. ಸುವರ್ಣ ವಿಧಾನಸೌಧಕ್ಕೆ‌ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ,

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಉತ್ತರಿಸಿ, ಸಮುದಾಯಕ್ಕೆ ಮೀಸಲಾತಿ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ. ಹಿಂದುಳಿದ ವರ್ಗಗಳ ಆಯೋಗದಿಂದ ಶೀಘ್ರದಲ್ಲಿ ವರದಿ ಬರುವ ವಿಶ್ವಾಸವಿದೆ ಎಂದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಯಾಗಬೇಕು, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬ ಉದ್ದೇಶದಿದ ಬೆಳಗಾವಿಯಲ್ಲಿ ಅಧಿವೇಶನ ಮಾಡಲಾಗುತ್ತಿದೆ. ಒಳ್ಳೆಯ ಚರ್ಚೆಗಳಾಗಬೇಕು, ನೆಲ, ಜಲ, ಭಾಷೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ನೀಡವ ನಿಟ್ಟಿನಲ್ಲಿ ಅಧಿವೇಶನ ನಡೆಯಬೇಕು ಎಂದು ಹೇಳಿದರು.

ಇದೇ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿವೇಶನಕ್ಕೆ ಗೈರಾಗುವುದಾಗಿ ಹೇಳಿದ್ದಾರೆ, ಕ್ಲೀನ್ ಚೀಟ್ ಸಿಕ್ಕರೂ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆತರಹವೇನೂ ಇಲ್ಲ. ಅವರು ಹೇಳದಿರುವುದನ್ನೂ ನೀವೇ ಸೇರಿಸಿಕೊಂಡು ಹೇಳಬೇಡಿ… ಈಶ್ವರಪ್ಪನವರ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣ ಸ್ಪೀಕರ್ ವಿವೇಚನೆಗೆ ಬಿಟ್ಟ ವಿಚಾರ:

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣವಾಗಲಿದ್ದು, ಕಾಂಗ್ರೆಸ್ ಈ ಬಗ್ಗೆ ಅಪಸ್ವರ ಎತ್ತಿದ್ದು, ಎಲ್ಲ ಮಹನೀಯರುಗಳ ಭಾವಚಿತ್ರವನ್ನು ಅಳವಡಿಸುವ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪತ್ರದ ವಿಚಾರ ಗಮನಕ್ಕೆ ಬಂದಿಲ್ಲ ಹಾಗೂ ವಿಧಾನಸಭೆಯಲ್ಲಿ ಭಾವಚಿತ್ರ ಅನಾವರಣಗೊಳಿಸುವುದು ಸ್ಪೀಕರ್ ರವರ ವಿವೇಚನೆಗೆ ಬಿಟ್ಟಿರುವ ವಿಚಾರ. ವಿರೋಧಪಕ್ಷದ ನಾಯಕರು ಹಾಗೂ ಸ್ಪೀಕರ್ ರೊಂದಿಗೂ ಈ ವಿಚಾರದ ಬಗ್ಗೆ ಮಾತಾನಾಡಲಾಗುವುದು ಎಂದರು.

*MES ಮಹಾಮೇಳಾವ್ ಗೆ ಬ್ರೇಕ್; ಪುಂಡಾಟಕ್ಕೆ ಖಾಕಿ ಗುನ್ನಾ*

https://pragati.taskdun.com/belagavimesmahamelavdsp-gadadireaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button