Latest

*ಖರ್ಗೆ ಕುಟುಂಬವನ್ನು ಸಾಪ್ ಮಾಡುತ್ತೇನೆ ಬಿಜೆಪಿ ಅಭ್ಯರ್ಥಿಯ ಆಡಿಯೋ ವೈರಲ್; ಸತ್ಯಾಸತ್ಯತೆ ಬಗ್ಗೆ ತನಿಖೆ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬದವರ ಬಗ್ಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾದಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಹೆಂಡತಿ ಮಕ್ಕಳನ್ನು ಸಾಪ್ ಮಾಡುತ್ತೇನೆ. ನನ್ನ ಬಳಿ ಅವರ ನಂಬರ್ ಇದ್ದರೆ ಅವರನ್ನು ಸಾಪ್ ಮಾಡುತ್ತೇನೆ ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಆಡಿಯೋ ಇತಿರುಚಲಾಗಿದೆಯೋ ಏನು ಎಂಬುದನ್ನು ನೋದಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಪರಿಶೀಲಿಸಲಾಗುವುದು ಎಂದರು.

Home add -Advt

ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹೇಳಿದರು.

https://pragati.taskdun.com/vijayapuracorporator-natashhusbandshoot-dead/


Related Articles

Back to top button