Latest

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರು; ಪ್ರಿಯಾಂಕ್ ಖರ್ಗೆ ಗೆ ತಿರುಗೇಟು ನೀಡಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ‌ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದೇ ವೇಳೆ ಬಿಟ್ ಕಾಯಿನ್ ವಿಚಾರವಾಗಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಿಯಾಂಕ್ ಖರ್ಗೆ ಮಾತಿಗೆ ನಾನು ರಿಯಾಕ್ಟ್ ಮಾಡಲ್ಲ. ಅವರು ಸ್ಪಷ್ಟ ಮಾಹಿತಿ ಪಡೆದು ಮಾತನಾಡಲಿ. ಈಗಾಗಲೇ ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ ಎಂಬುದನ್ನು ನಾನು ಹೇಳಿದ್ದೇನೆ. ಆ ಬಗ್ಗೆ ಅವರು ಚಿಂತನೆ ನಡೆಸಲಿ ಎಂದರು.
ಬಿಟ್ ಕಾಯಿನ್ ಕೇಸ್; ಸಿಎಂ ಬಲಿ ಪಡೆಯುತ್ತೆ

Related Articles

Back to top button