Latest

*ಜೇನುನೊಣಗಳಿಂದ ಕಚ್ಚಿಸಿಕೊಂಡರೂ ಸಿಹಿ ಹಂಚಿದ್ದೇನೆ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮೀಸಲಾತಿ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಜೇನುನೊಣಗಳಿಂದ ಕಚ್ಚಿಸಿಕೊಂಡರೂ ಸಿಹಿ ನೀಡುವ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಜೇನುನೊಣಗಳಿಂದ ಕಚ್ಚಿಸಿಕೊಂಡು ಸಿಹಿ ನೀಡುವ ಕೆಲಸ ಮಾಡಿದ್ದೇನೆ. ಆದರೆ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸುಇದರು.

ಒಳಮೀಸಲಾತಿ ವಿಚರ 30 ವರ್ಷಗಳಿಂದ ಇತ್ತು. ಆದರೆ ಕಾಂಗ್ರೆಸ್ ನವರು ಆ ಜನಾಂಗದವರಿಗೆ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟರು. ನಮಗೆ ಬದ್ಧತೆ ಇದೆ. ಹಾಗಾಗಿ ಈ ಬಗ್ಗೆ ಅಧ್ಯಯನ ಮಾಡಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಿ ಕಾನೂನು ಪ್ರಕಾರ ಜಾರಿಗೆ ತಂದಿದ್ದೇವೆ. ನಮ್ಮಿಂದ ಸಾಧ್ಯವಾಗದಿರುವುದನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ಹತಾಶರಾಗಿ ಕಾಂಗ್ರೆಸ್ ನವರು ಮಾತನಾಡುತ್ತಿದ್ದಾರೆ. ಆದರೆ ಅವರ ಮಾತಿಗೆ ಬೆಲೆ ಇಲ್ಲ ಎಂದು ಹೇಳಿದರು.

Related Articles

Back to top button