LatestUncategorized

*ಸಿದ್ದರಾಮಯ್ಯ ಹೇಳಿಕೆಯಿಂದ ನೋವಾಗಿದೆ ಎಂದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಡೀ ಸಮಾಜದ ಆತ್ಮವನ್ನೇ ಕೆಣಕಿದ್ದಾರೆ, ಸಮುದಾಯದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು ಸರಿಯಲ್ಲ. ಸಿದ್ದರಾಮಯ್ಯನವರ ಹೇಳಿಕೆಯಿಂದ ನೋವಾಗಿದೆ. ಇದರಿಂದ ಸಮುದಾಯದ ಜನರಿಗೂ ಬಹಳ ನೋವುಂಟಾಗಿದೆ. ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು ಎನಿಸುತ್ತದೆ ಎಂದು ಗುಡುಗಿದ್ದಾರೆ.

ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು.

ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.

https://pragati.taskdun.com/siddaramaihclarificationlingayata-statment/
https://pragati.taskdun.com/karnatakarain-updateimd-6/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button