LatestUncategorized

*ಅವರಿಬ್ಬರೂ ಸಿಎಂ ಕನಸು ಕಾಣ್ತಿದ್ದಾರೆ, ನನಸಾಗಲ್ಲ ಎಂದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನು ಸಿಎಂ ಹುದ್ದೆ ಆಕಾಂಕ್ಷಿ. ಡಿ.ಕೆ.ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ಸಹಜ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರಿಬ್ಬರೂ ಮುಖ್ಯಮಂತ್ರಿ ಹುದ್ದೆ ಕನಸು ಕಾಣ್ತಿದ್ದಾರೆ. ಆದರೆ ನನಸಾಗಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಇಲ್ಲದ ಸೀಟ್ ಗೆ ಗುದ್ದಾಡುತ್ತಿದ್ದಾರೆ. ಅವರು ಕನಸು ಕಂದರೂ ಜನರು ಆಯ್ಕೆ ಮಾಡಬೇಕಲ್ಲ? ಜನರ ಮನಸ್ಸಿನಲ್ಲಿಯೇ ಕಾಂಗ್ರೆಸ್ ಇಲ್ಲ ಎಂದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಹೇಗೆ?

ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ. ಜನರ ಬೆಂಬಲವಿದ್ದರೆ ಮಾತ್ರ ಶಾಸಕರಾಗಿ ಆಯ್ಕೆಯಾಗುವುದು. ಇಲ್ಲ ಅಂದ್ರೆ ಆಯ್ಕೆಯಾಗಲ್ಲ. ಡಿ.ಕೆ.ಶಿವಕುಮಾರ್ ಹೋದ ಕಡೆ ಎಲ್ಲ ನನಗೆ ಆಶಿರ್ವಾದ ಮಾಡಿ ಎಂದು ಕೇಳುತ್ತಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ ಸಿಎಂ ಕನಸು ಕಾಣ್ತಿದ್ದಾರೆ. ಅದು ನನಸಾಗಲ್ಲ ಎಂದು ಹೇಳಿದರು.

https://pragati.taskdun.com/d-k-shivakumarfirmandyavidhanasabha-election/

Home add -Advt

Related Articles

Back to top button