Uncategorized

*ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇವೆ. ಆದರೂ ನಮಗೆ ಬಹುಮತ ದೊರೆತಿಲ್ಲ. ನಮ್ಮ ಕಾರ್ಯಕರ್ತರು, ಎಲ್ಲ ನಾಯಕರು, ಪ್ರಧಾನಮಂತ್ರಿಗಳನ್ನು ಸೇರಿದಂತೆ ಶ್ರಮವಹಿಸಿ ಕೆಲಸ ಮಾಡಿದ್ದೇವು.

ಕಾಂಗ್ರೆಸ್ ಗೆ ಬಹುಮತ ದೊರೆತಿದೆ.‌ ನಮ್ಮ ತಪ್ಪುಗಳನ್ನು ವಿಶ್ಲೇಷಣೆ ಮಾಡಿ, ಅದರ ಬಗ್ಗೆ ಕುಳಿತು ಸಮಾಲೋಚನೆ ಮಾಡುತ್ತೇವೆ. ಒಂದು ರಾಷ್ಟ್ರೀಯ ಪಕ್ಷವಾಗಿ ನಮ್ಮ ಕುಂದು ಕೊರತೆಯನ್ನು ಸರಿದೂಗಿಸಿಕೊಂಡು ಸಂಸತ್ ಚುನಾವಣೆಗೆ ಮರು ಸಿದ್ಧತೆ ಮಾಡಿಕೊಳ್ಳುತ್ತೇವೆ. ಪಕ್ಷವನ್ನು ಪುನಃ ಸಂಘಟಿಸಿ ನಾವು ಮತ್ತೆ ಪುನರಗಾಮಿಸುತ್ತೇವೆ ಎಂದರು.

Home add -Advt
https://pragati.taskdun.com/mallikarjuna-khargepressmeetvidhanasabha-electioncongress-win/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button