Latest

ರಾಜ್ಯ ರಾಜಕೀಯ ಸ್ಥಿತಿಗತಿ ಆಧಾರದ ಮೇಲೆ ಬದಲಾವಣೆ ಸಾಧ್ಯತೆ; ಅಚ್ಚರಿ ಹೇಳಿಕೆ ನೀಡಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ಚರ್ಚೆಯಾಗಿದೆ. 2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಅಮಿತ್ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಿ ಸಂಪುಟ ಪುನಾರಚನೆ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ ಎಂದರು.

ನಿನ್ನೆಯ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ಸಂಬಂಧ ಯಾರ ಹೆಸರನ್ನು ನಾನು ಪ್ರಸ್ತಾಪಿಸಿಲ್ಲ. ಮುಂದಿನ ವಾರ ಬಹಳ ಮುಖ್ಯ. ಕಾರಣ ಸ್ಥಳೀಯ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯ ರಾಜಕೀಯ ಸ್ಥಿತಿಗತಿ ಆಧಾರದ ಮೇಲೆ ಬದಲಾವಣೆಯಾಗಬಹುದು. ಮೂರ್ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ; ಭಾರಿ ಕುತೂಹಲ ಮೂಡಿಸಿದ ಚರ್ಚೆ

Related Articles

Back to top button