Latest

ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ ಐ ಪರ ಗೋಡೆ ಬರಹ ವಿಚಾರ; ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಚುನಾವಣಾ ವರ್ಷವಾಗಿರುವುದರಿಂದ ಜನರ ಬಳಿಗೆ ತೆರಳಿ ಅವರ ಸಮಸ್ಯೆ ಆಲಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

Related Articles

ಹಾವೇರಿ ಜಿಲ್ಲೆಯ ಶಿಗ್ಗಾಂವಿಗೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ನಮ್ಮ ಜನಸಂಕಲ್ಪ ಯಾತ್ರೆ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ ಭಾಗದಲ್ಲಿ ನಡೆಯುತ್ತಿದೆ. ಅಭೂತಪೂರ್ವ ಬೆಂಬಲ ಸಿಕ್ಕಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರ ಮುಂದಿಟ್ಟು ವಿವರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಇದೇ ವೇಳೆ ಪಿಎಸ್ ಐ ಸಂಘಟನೆ ಬ್ಯಾನ್ ಆಗಿದ್ದರೂ ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಪಿ ಎಫ್ ಐ ಸಂಘಟನೆ ಪರ ಗೋಡೆ ಬರಹಗಳನ್ನು ಬರೆಯಲಾಗಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಲ್ಲದರ ಬಗ್ಗೆಯೂ ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Home add -Advt

ಬೆಳಗಾವಿ: ಒಡಹುಟ್ಟಿದ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಬಂದು ಶರಣಾದ ತಮ್ಮ

https://pragati.taskdun.com/belagaviyounger-brothermurderelder-brother/

Related Articles

Back to top button