
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂದಿದ್ದು, ವಿಪಕ್ಷ ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಕ್ಕಿದ್ದು, ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಸಿಎಂ ಬಸವರಾಅಜ್ ಬೊಮ್ಮಾಯಿ ಇಂದು ಸಂಜೆ ರಾಜಭವನಕೆ ತೆರಳಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸುಬಂದಿದೆ.
ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 65 ಸ್ಥಾನಗಳಲ್ಲಿ ಗೆಲುವು ಕಾಯ್ದುಕೊಂಡಿದ್ದರೆ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 19 ಹಾಗೂ ಇತರೆ 4 ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ