ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜಭವನಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 224 ಕ್ಷೇತ್ರಗಳಲ್ಲಿ ಬಿಜೆಪಿ 65 ಸ್ಥಾನಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್ 136 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಜೆಡಿಎಸ್ 19 ಸ್ಥಾನ ಹಾಗೂ ಇತರೆ 4 ಸ್ಥಾನಗಳನ್ನು ಪಡೆದುಕೊಂಡಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ