
ಪ್ರಗತಿವಾಹಿನಿ ಸುದ್ದಿ :ಬೆಂಗಳೂರು; 26 ಕೋಟಿ ವೆಚ್ಚದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಶಾಸಕ ಆನಂದ್ ಮಾಮನಿ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಜತೆ ಸಭೆ ನಡೆಸಿದರು. ಸಭೆಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ.
ಸದ್ಯ ದೇವಸ್ಥಾನದ ವಸತಿಗ್ರಹದಲ್ಲಿ 400 ಕೊಠಡಿಗಳಿದ್ದು, ಇನ್ನೂ 200 ಕೊಠಡಿ ಹೆಚ್ಚಿಸುವಂತೆ ಸೂಚಿಸಿದ್ದಾರೆ. ವಸತಿ ಸಮುದಾಯದ ಕೆಳಗೆ ಅನ್ನದಾಸೋಹ ಕೇಂದ್ರ ತೆರೆಯಲು ಹಾಗೂ ಸ್ನಾನಗೃಹ, ಶೌಚಾಲಯ ನಿರ್ಮಾಣಕ್ಕೆ ಸೂಚಿಸಿದ್ದಾರೆ.
ದೇವಸ್ಥಾನದಲ್ಲಿ ಎರಡು ಪ್ರತ್ಯೇಕ ಸರತಿ ಸಾಲು ನಿರ್ಮಿಸಿ ಅದರಲ್ಲಿ ಒಂದು ವಿಶೇಷ ದರ್ಶನಕ್ಕೆ ಅವಕಾಶ ನೀಡುವಂತೆ ತಿಳಿಸಿದ್ದಾರೆ. ದೇವಸ್ಥಾನದ ಸುತ್ತಲು ಮೂರು ಜಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ, ವ್ಯಪಾರಿಗಳಿಗೆ ಅಂಗಡಿ ತೆರೆಯಲು ಸ್ಥಳಾವಕಾಶ ನೀಡುವಂತೆಯೂ ಹೇಳಿದ್ದಾರೆ. ಜುಲೈ 20ರಂದು ಆನಂದ್ ಮಾಮನಿ ಇನ್ನೊಂದು ಸುತ್ತಿನ ಸಭೆ ನಡೆಸಿ ಸಿಎಂ ಅವರಿಗೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಭಾರಿ ಮೇಘಸ್ಫೋಟ; ಏಕಾಏಕಿ ಪ್ರವಾಹ; 8 ಜನರು ನಾಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ