Latest

*ಸಿಎಂ ವಿರುದ್ಧ ಶಿಗ್ಗಾವಿಯಿಂದ ಸ್ಪರ್ಧಿಸಲಿದ್ದಾರಾ ವಿನಯ್ ಕುಲ್ಕರ್ಣಿ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೇಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲ್ಕರ್ಣಿ, ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

Home add -Advt

ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ವಿನಯ್ ಕುಲ್ಕರ್ಣಿ ಸಿಎಂ ಬೊಮ್ಮಾಯಿ ಅವರಿಗೆ ಪ್ರಬಲ ಸ್ಪರ್ಧಿ. ಇನ್ನು ವಿನಯ್ ಕುಲ್ಕರ್ಣಿ ಇಂದು ಎಂ.ಬಿ.ಪಾಟೀಲ್ ಜೊತೆ ದೆಹಲಿಗೆ ತೆರಳಿದ್ದಾರೆ. ಅಲ್ಲದೇ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಲಿದ್ದು, ಕೈ ಟಿಕೆಟ್ ಆಕಾಂಕ್ಷಿಗಳು ಕೊನೆ ಕ್ಷಣದಲ್ಲಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಹೆಣೆದಿದ್ದಾರೆ.

Related Articles

Back to top button