Latest

ಬಹುವರ್ಷಗಳ ರಾಜ್ಯದ ಬೇಡಿಕೆಗೆ ಕೇಂದ್ರ ಒಪ್ಪಿಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ.

ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ

ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ.

ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ವಿಮಾನವನ್ನು ಅರ್ಧದಲ್ಲೇ ಬಿಟ್ಟು ಹೋದ ಪೈಲೆಟ್ !

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button