ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಬಜೆಟ್ ಮಂಡನೆ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ತಮ್ಮ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಆರ್.ಟಿ.ನಗರದ ನಿವಾಸದ ಬಳಿಯಿರುವ ಶ್ರೀಕಂಠೇಷ್ವರ ದೇವಾಲಯಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಮೊದಲ ಬಜೆಟ್ ಮಂಡಿಸಲಿರುವ ಸಿಎಂ ಬೊಮ್ಮಾಯಿ; ನಿರೀಕ್ಷೆಗಳು ಹಲವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ