ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಇಲ್ಲವಾದಲ್ಲಿ ರಾಜಕೀಯದಿಂದಲೇ ನೀವೃತ್ತಿ ಪಡೆದುಕೊಳ್ಳುವುದಾಗಿ ಘೋಷಿಸಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ರಾಜಕೀಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯನವರು ಈಡೇರಿಸಲು ಸಾಧ್ಯವಗದ ಭರವಸೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಇಂಧನ ಇಲಾಖೆ ದುಸ್ಥಿತಿಯಲ್ಲಿತ್ತು. ನಮ್ಮ ಸರ್ಕಾರ ಬಂದಮೇಲೆ ಸುಧಾರಿಸಿದೆ. ನಾವು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ಕೊಡುತ್ತಿದ್ದೇವೆ ಎಂದಿದ್ದೇವೆ. ಇವರು ರಾಜ್ಯದ ಜನತೆಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಕಾಂಗ್ರೆಸ್ ನಾಯಕರು ಅಸಾಧ್ಯವಾದ ಭರವಸೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ನಿವೃತ್ತಿ ಪಡೆಯಬೇಕಾದ ಸ್ಥಿತಿ ಬರಲಿದೆ ಎಂದು ಟೀಕಿಸಿದರು.
ಇದೇ ವೇಳೆ ತಾವು ಜಾರಿಗೆ ತಂದ ಯೋಜನೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಅವರ ಮನೆ ಹಾಳಾಗಾ ಎಂದು ಬಾಯ್ಗೆ ಬಂದಂತೆ ಬೈದಿದ್ದರು. ಈ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತರಿಸಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯನವರು ಇತ್ತೀಚಿನ ದಿನಗಳಲ್ಲಿ ವೈಯಕ್ತಿಕವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅದು ಎಷ್ಟರ ಮಟ್ಟಿಗೆ ಸರಿ ಎಂದು ಅವರೇ ಯೋಚಿಸಬೇಕು. ಎಲ್ಲದಕ್ಕೂ ಒಂದು ಲಿಮಿಟ್ ಇರುತ್ತದೆ. ವೈಯಕ್ತಿಕವಾದ ಟೀಕೆಗಳಿಗೆ ನಾನು ಉತ್ತರಿಸದಿರಲು ನಿರ್ಧರಿಸಿದ್ದೇನೆ. ನಾವು ಕೂಡ ಸಿದ್ದರಾಮಯ್ಯ ಸರ್ಕಾರದ ದುರಾಡಳಿತದ ಬಗ್ಗೆ ಟಿಕಿಸಿದ್ದೆವು. ಆದರೆ ವೈಯಕ್ತಿಕ ಟೀಕೆ ಮಾಡಿರಲಿಲ್ಲ. ವೈಯಕ್ತಿವಾದ ಟೀಕೆಗೆ, ಕೇವಲವಾದ ಮಾತಿಗೆ ಪ್ರತಿಕ್ರಿಯೆ ನೀಡಬಾರದು. ಈತರಹದ ಮಾತು ಅವರ ಹಿರಿತನ, ಗೌರವಕ್ಕೆಶೋಭೆತರಲ್ಲ ಎಂದು ಖಡಕ್ ಆಗಿ ಉತ್ತರಿಸಿದರು.
*ಕೊಟ್ಟ ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಘೋಷಣೆ; ಸಂಚಲನ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ*
https://pragati.taskdun.com/siddaramaihannounce10-kg-free-ricepolitical-retairment/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ