Latest

ಸಿಎಂ ಬೊಮ್ಮಾಯಿ ಭಾಷಣ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟ; ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ತುಮಕೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾಡಿದ್ದ ಭಾಷಣವನ್ನು ತಿರುಚಿದ್ದ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ವೈರಲ್ ಮಾಡಿದ್ದರು. ಈ ಬಗ್ಗೆ ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ಪವನ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಿಎಂ ಭಾಷಣದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ತಿರುಚಿ, ಪರಮೇಶ್ವರ್ ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ ಎಂಬಂತೆ ತಿರುಚಿ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು.

ಸಿಎಂ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಸಾರ್ವಜನಿಕ ಸೇವಾ ಬಳಗ ಎಂಬ ವಾಟ್ಸಪ್ ಗ್ರೂಪ್ ಹಾಗೂ ಡಾ.ಜಿ.ಪರಮೇಶ್ವರ್ ಕೊರಟಗೆರೆ ಎಂಬ ಫೇಸ್ ಬುಕ್ ಪೇಜ್ ನಲ್ಲಿ ವೈರಲ್ ಮಾಡಲಾಗಿತ್ತು.

Home add -Advt

ಡಿ.ಕೆ.ಶಿವಕುಮಾರ್ ಭೇಟಿಯಾದ ಹೆಚ್.ವಿಶ್ವನಾಥ್; ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಹಳ್ಳಿಹಕ್ಕಿ?

 

https://pragati.taskdun.com/d-k-shivakumarh-vishwanathmeet/

Related Articles

Back to top button