ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ಇದೀಗ 15-18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ.
ಹೊಸ ವರ್ಷದ ಮೊದಲ ತಿಂಗಳು ಜನವರಿ 3ರಿಂದ ಮಕ್ಕಳಿಗೆ ಲಸಿಕೆ ವಿತರಣೆ ಆರಂಭವಾಗಲಿದೆ. ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕೋವಿಡ್ ವಿರುದ್ಧ ಹೋರಾಡಲು ಮಕ್ಕಳಿಗೂ ಲಸಿಕೆ ಆರಂಭಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ದೂರದೃಷ್ಟಿ, ಪ್ರಯತ್ನ ಹಾಗೂ ನಿರ್ಣಯಗಳು ಕೊರೊನಾ ಹೋಗಲಾಡಿಸುವಲ್ಲಿ ಯಶಸ್ವಿಯಾಗಲು ಸಹಕಾರಿಯಾಗಲಿದೆ ಎಂಬ ನಂಬಿಕೆಯಿದೆ ಎಂದು ಸಿಎಂ ತಿಳಿಸಿದ್ದಾರೆ.
ಪ್ರಧಾನಿ ಮೋದಿ ನಿರ್ಣಯ, ಸಲಹೆ ದೇಶ ಹಾಗೂ ರಾಜ್ಯದ ಜನತೆ ಹಿತದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. ಮಕ್ಕಳು, ಆರೋಗ್ಯ ಸೇವಾ ಕಾರ್ಯಕರ್ತರು, ವಯೋವೃದ್ಧರನ್ನು ಮಹಾಮಾರಿ ಕೋವಿಡ್ ನಿಂದ ರಕ್ಷಿಸಲು ಲಸಿಕೆಯಿಂದ ಸಾಧ್ಯವಾಗಲಿದೆ. ಮಕ್ಕಳಿಗೂ ಲಸಿಕೆ ನೀಡುವ ನಿರ್ಧಾರ ಮಾಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ