ಪ್ರಗತಿವಾಹಿನಿ ಸುದ್ದಿ; ಉಡುಪಿ: ಕೊರೊನಾ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಮತ್ತೆ ಕಠಿಣ ನಿಯಮ ಜಾರಿ ಮಾಡುವ ಬಗ್ಗೆ ಸುಳಿವು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಂತೆ ತಜ್ಞರ ತುರ್ತು ಸಭೆ ಕರೆದು ನಿರ್ಧರಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ತಜ್ಞರ ಸಲಹೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಯಾವರೀತಿ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.
ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಕಳೆದ 40 ದಿನಗಳಲ್ಲಿ 400ಕ್ಕೂ ಹೆಚ್ಚು ಪ್ರಕರಣ ವರದಿಯಾಗುತ್ತಿದೆ. ಮಕ್ಕಳಲ್ಲಿ ಕೂಡ ಸೋಂಕು ಹರಡುತ್ತಿದೆ. ಈ ನಿಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಹಲವು ಬಿಗಿ ಕ್ರಮಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಭೀಕರ ಅಪಘಾತ; ರಸ್ತೆ ಮಧ್ಯೆಯೇ ಹೊತ್ತಿ ಉರಿದ ಲಾರಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ