Latest

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರ ಅನುಕೂಲಕ್ಕೆ 3 ಎಕರೆ ಜಾಗ; ಸಿಎಂ ಬೊಮ್ಮಾಯಿ ಭರವಸೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಈ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಕಟ್ಟಡ, ಆ ಭಾಗದಿಂದ ಬರುವ ವಿದ್ಯಾರ್ಥಿಗಳು, ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲು ವಸತಿ ನಿಲಯ ನಿರ್ಮಾಣ ಮಾಡಲು ಶೀಘ್ರವೇ ಜಮೀನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದರೊಂದಿಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವಂತೆ ನಿಯೋಗ ಮಾಡಿದ ಮನವಿಗೆ ಸಿಎಂ ಸಕಾರಾತ್ಮಕ ಸ್ಪಂದಿಸಿದರು.

Home add -Advt

ಮುಖ್ಯಮಂತ್ರಿಗಳ ಭೇಟಿಯ ನಿಯೋಗದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ, ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭಿಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ ಹಾಜರಿದ್ದರು.
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಫೈಟ್

Related Articles

Back to top button