LatestUncategorized

*ಸೋತ ಸಚಿವರ ಮನೆಗೆ ತೆರಳಿ ಧೈರ್ಯ ತುಂಬಿದ ಹಂಗಾಮಿ ಸಿಎಂ ಬೊಮ್ಮಾಯಿ*

ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ – ಹಂಗಾಮಿ ಸಿಎಂ ಬೊಮ್ಮಾಯಿ

Home add -Advt

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೋಮಣ್ಣನವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸೋಮಣ್ಣ ನಮ್ಮ ಹಿರಿಯ ನಾಯಕರು. ಸುಮಾರು 40 ವರ್ಷ ಜನಸೇವೆ ಮಾಡಿದವರು. ವಸತಿ ಸಚಿವರಾಗಿ ಅವರು ಬೆಂಗಳೂರಿನ ಅಭಿವೃದ್ಧಿಗೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರ ಮಾಡಿದ್ದಾರೆ. ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ. ಅದನ್ನು ಮೀರಿ ಮತ್ತೆ ಬರಬೇಕು. ಸೋಮಣ್ಣ ಮತ್ತು ಪಕ್ಷ ಎರಡು ಕೂಡ ಆ ಕೆಲಸ ಮಾಡಲಿದೆ ಎಂದು ಹಂಗಾಮಿ ಸಿಎಂ ಬೊಮ್ಮಾಯಿ ಹೇಳಿದರು.

ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ತಿಳಿದ ಮೇಲಷ್ಟೇ ಮಾತನಾಡಬಹುದು. ನಾಳೆ ಅಥವಾ ನಾಡಿದ್ದು ಅಧ್ಯಕ್ಷರು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಾಡಬಹುದು ಎಂದು ಬೊಮ್ಮಾಯಿ ಹೇಳಿದರು.

ಮಾಜಿ ಸಚಿವ ಸೋಮಣ್ಣ ಭೇಟಿಗೂ ಮುನ್ನ ಹಂಗಾಮಿ ಸಿಎಂ ಬಸವರಾಜ್ ಬೊಮಮಯಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಈ ವೇಳೆ ಮಾತನಾಡಿದ ಬೊಮ್ಮಾಯಿ, ನಮ್ಮ ಜೊತೆ ಕೆಲಸ ಮಾಡಿದವರು, ಅಲ್ಪ ಪ್ರಮಾಣದಲ್ಲಿ ಸೋತಿದ್ದು, ಅವರೆಲ್ಲರ ಮನೆಗೆ ಭೇಟಿ ನೀಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿಗೆ ಕಾರಣವೇನು ಎಂಬ ಬಗ್ಗೆ ಪರಾಮರ್ಶೆ ಮಾಡಿದ್ದೇವೆ ಎಂದರು.

https://pragati.taskdun.com/d-k-shivakumarreactioncm-post/

Related Articles

Back to top button