Belagavi NewsBelgaum NewsKannada News

*ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಅಡ್ಡರ್) ಬೆಂಗಳೂರು ಇವರಿಂದ ರಾಜ್ಯದ ಪರಿಶಿಷ್ಟ ಜಾತಿಯ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ ಮತ್ತು ಮೋಚಿ ಜಾತಿಗೆ ಸೇರಿದ ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿ ಕುಟುಂಬಗಳ ಯುವ ಜನರಿಗೆ ಚರ್ಮ ಉದ್ಯಮದಲ್ಲಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳಿಗೆ ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮಂಚೂಣಿಯಲ್ಲಿರುವ ರಾಜ್ಯಗಳಾದ ದೆಹಲಿ, ಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ವಿವಿಧ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/ಪಿ.ಯು.ಸಿ ಉತ್ತೀರ್ಣ ಹಾಗೂ ಯಾವುದೇ ಸಾಮಾನ್ಯ ಪದವಿಗಳನ್ನು ಪಡೆದ ಪರಿಶಿಷ್ಟ ಜಾತಿಗೆ ಸೇರಿದ ಆಸಕ್ತ ಅಭ್ಯರ್ಥಿಗಳು ಜುಲೈ 5, 2025 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗೆ ನಿಯೋಜಿಸಲಾಗುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಶಿಷ್ಯ ವೇತನವನ್ನು ನೀಡಲಾಗುವುದು.

Home add -Advt

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ : 08312422643ಗೆ ಅಥವಾ ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಡ್ಡರ್ ಮಾರಾಟ ಮಳಿಗೆಯ ಜಿಲ್ಲಾ ಸಂಯೋಜಕರು ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಆವರಣ ನೆಹರು ನಗರ ಬೆಳಗಾವಿ ಇಲ್ಲಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ಸಂಯೋಜಕರು ಪ್ರಕಡಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button