
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಸಮ್ಮತಿ ಸೂಚಿಸಿದ್ದು, ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ವಿ.ಸೋಮಣ್ಣ, ಪ್ರಭು ಚೌವ್ಹಾಣ್, ಸಿ.ಸಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರಿಗೆ ಕೊಕ್ ಕೊಡುವ ಸಾಧ್ಯತೆ ಇದ್ದು, 24 ಅಥವಾ 26 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ನೂತನ ಸಚಿವರ ಪಟ್ಟಿಯೊಂದಿಗೆ ಇಂದು ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಯಡಿಯೂರಪ್ಪ ಅವಧಿಯ 10 ಹುದ್ದೆಗಳು ರದ್ದು