Latest

ಸಿಎಂ ಗೆ ಕರೆ ಮಾಡಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಹಿತಿ ಪಡೆದುಕೊಂಡಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಬೆಳಿಗ್ಗೆ ಪ್ರಧಾನಿ ಮೋದಿ ದೂರವಾಣಿ ಮೂಲಕ ಕರೆ ಮಾಡಿದ್ದರು. ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಸಂಭವಿಸಿರುವ ಹಾನಿ ಬಗ್ಗೆ ವಿವರಣೆ ಕೇಳಿದರು. ರಾಜಧಾನಿ ಬೆಂಗಳೂರು ಸೇರಿದಂತೆ ಜಿಲ್ಲಾವಾರು ಸಂಭವಿಸಿರುವ ಅನಾಹುತಗಳ ಬಗ್ಗೆ ಮಾಹಿತಿ ಪಡೆದರು.

Related Articles

ಬೆಳೆ ಹಾನಿ ಕುರಿತಾಗಿಯೂ ವಿಚಾರಿಸಿದ್ದಾರೆ. ರಾಜ್ಯಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಪರಿಹಾರ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು ಎಂದರು.

ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಮತ್ತೆ ಭಾರಿ ಮಳೆ ಮನ್ಸೂಚನೆ; ಚಂಡಮಾರುತದ ಎಚ್ಚರಿಕೆ

Home add -Advt

Related Articles

Back to top button