Latest

ಅತಿಥಿ ಉಪನ್ಯಾಸಕರ ಪ್ರತಿಭಟನೆ; ಸಚಿವ ಡಾ.ಅಶ್ವತ್ಥನಾರಾಯಣ ಭೇಟಿಯಾದ ಪರಿಷತ್ ಸದಸ್ಯರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ತಿನ ಸದಸ್ಯರು, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ವೇತನ ಹೆಚ್ಚಳ, ಸೇವೆ ಕಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ|| ಅಶ್ವತ್ಥನಾರಾಯಣ್ ರವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಅರುಣ ಶಹಾಪುರ, ಎಸ್.ವಿ ಸಂಕನೂರ ಭೇಟಿ ಮಾಡಿ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶಿಕ್ಷಕ ಹಾಗೂ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರುಗಳ ಸಭೆ ಹಾಗೂ ಅತಿಥಿ ಉಪನ್ಯಾಸಕರ ವಿವಿಧ ಸಂಘಟನೆಗಳ ಅಧ್ಯಕ್ಷರು, ಮುಖಂಡರ ಜೊತೆ ಸಭೆ ನಡೆಸುವಂತೆ ಮನವಿ ಮಾಡಿದರು.

Home add -Advt

ಬೇಡಿಕೆಗೆ ಸ್ಪಂದಿಸಿದ ಉನ್ನತ ಶಿಕ್ಷಣ ಸಚಿವರು ಶೀಘ್ರದಲ್ಲೇ ಸಭೆ ಕರೆದು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮವಹಿಸುವಲ್ಲಿ ಎಲ್ಲರ ಸಹಕಾರ ಪಡೆಯುವದಾಗಿ ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ

Related Articles

Back to top button