Kannada NewsLatest
ನಾಳೆ ಬೆಳಗಾವಿಗೆ ಜೊತೆಯಾಗಿ ಬರಲಿದ್ದಾರೆ ಸಿಎಂ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಇಬ್ಬರೂ ಒಂದೇ ವಿಮಾನದಲ್ಲಿ ಆಗಮಿಸಲಿದ್ದಾರೆ. ಮಧ್ಯಾಹ್ನ 1.55ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನದಲ್ಲಿ ಇಬ್ಬರೂ ಗಮಿಸಲಿದ್ದಾರೆ.
ಬೊಮ್ಮಾಯಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಶಿಗ್ಗಾವಿಗೆ ತೆರಳುವರು.
ಡಿ.ಕೆ.ಶಿವಕುಮಾರ ಅವರು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 8 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳುವರು.
ಬೆಳಗಾವಿ, ಹಾವೇರಿ, ಧಾರವಾಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ