ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಎದುರಾಗಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಯಿತು.
ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಕೋವಿಡ್ ಸಲಹಾ ಸಮಿತಿ ಸಲಹೆಯಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ ಎಂದು ಹೇಳಿದರು. ಅಲ್ಲದೇ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಮಾಹಿತಿ ನೀಡಿದರು.
ಆದಷ್ಟು ಬೇಗ ಎಲ್ಲರೂ 3ನೇ ಡೋಸ್ ಪಡೆದುಕೊಳ್ಳಬೇಕು. ಮೂರನೇ ಡೋಸ್ ಲಸಿಕಾಕರಣಕ್ಕೆ ನಿರ್ಧಾರ ಮಾಡಲಾಗಿದೆ. ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆ ಮೀಸಲಿಡಲು ಸೂಚಿಸಲಾಗಿದೆ. ಒಳಾಂಗಣ ಪ್ರದೇಶದಲ್ಲಿ, ಎಸಿ ಇರುವೆಡೆಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಲು ಸಲಹೆ ನೀಡಲಾಗಿದೆ. ILI ಮತ್ತು SARI ಕೇಸ್ ಗಳ ಟೆಸ್ಟಿಂಗ್ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದರು.
ಆಕ್ಸಿಜನ್ ಪಾಲಂಟ್ ಮಾಡಲು ಹಾಗೂ ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್ ಟೆಸ್ಟ್ ಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಕೋವಿಡ್ ಕಡಿಮೆಯಾಗಿದೆ ಎಂದು ಮೂರನೇ ಡೋಸ್ ಪಡೆಯಲು ಮೀನಾಮೆಷ ಎಣಿಸುವುದು ಬೇಡ. ಈ ವಿಚಾರದಲ್ಲಿ ನಿರ್ಲಕ್ಷ ಸರಿಯಲ್ಲ. ಪ್ರತಿಯೊಬ್ಬರೂ ಮೂರನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದರು.
ಇನ್ನು ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಅನುಮತಿ ವಿಚಾರ, ಮುಂಜಾಗೃತಾ ಕ್ರಮಗಳ ಬಗ್ಗೆ ಸಂಜೆ ವೇಳೆಗೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊವಿಡ್ ಮುಂಜಾಗ್ರತೆ ಕುರಿತು ನಡೆಸಿದ ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರಾದ ಆರ್ ಅಶೋಕ್, ಡಾ. ಕೆ. ಸುಧಾಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮೊದಲಾದವರು ಉಪಸ್ಥಿತರಿದ್ದರು.
*ಮತ್ತೆ 10 ದಿನ ಗಡುವು ಕೇಳಿದ ಸಿಎಂ*
https://pragati.taskdun.com/panchamasali-2a-reservationsamaveshacm-basavaraj-bommaimeeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ