Kannada NewsKarnataka News

ಜ್ಞಾನೇಶ್ವರಿ ಪಾರಾಯಣ ಕಾರ್ಯಕ್ರಮಕ್ಕೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೋಕನೂರ ಗ್ರಾಮದಲ್ಲಿ ಪ್ರತಿವರ್ಷ ಸಾಂಪ್ರದಾಯಿಕವಾಗಿ ನವರಾತ್ರಿ ಉತ್ಸವ ನಡೆಯುತ್ತದೆ.

 ನವರಾತ್ರಿ ಹಬ್ಬದ ಪ್ರಯುಕ್ತ ನಡೆಯುವ ಜ್ಞಾನೇಶ್ವರಿ ಪಾರಾಯಣ ಕಾರ್ಯಕ್ರಮಕ್ಕೆ ಮಂಗಳವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.  ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ದುರ್ಗಾದೇವಿ ಗ್ರಾಮಸ್ಥರಿಗೆ ಸುಖ, ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು.

ನಂತರ ಇತ್ತೀಚಿಗೆ ಮಳೆಯ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಪ್ರವೇಶ ನೀಡುವ ರಸ್ತೆಯು ಹಾನಿಗೊಳಗಾಗಿದ್ದು ರಸ್ತೆಯನ್ನು ಲಕ್ಷ್ಮಿ ಹೆಬ್ಬಾಳಕರ್ ಪರಿಶೀಲನೆ ಮಾಡಿದರು.

ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳ ಬಗ್ಗೆ ಚರ್ಚಿಸಿದ ಶಾಸಕಿ, ಅಗತ್ಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.

Home add -Advt

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು,  ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಪಿಡಿಓ ಹಾಗೂ ವಾರ್ಕರಿ ಸಂಪ್ರದಾಯಸ್ಥರು ಉಪಸ್ಥಿತರಿದ್ದರು.

Related Articles

Back to top button