Belagavi NewsBelgaum NewsKannada NewsKarnataka NewsPolitics

*ಸಿಎಂ ಬೆಳಗಾವಿಗೆ ಬಂದು ಬಿರಿಯಾನಿ ತಿಂದು ಹೋಗುತ್ತಾರೆ: ಆರ್ ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಬೆಳೆ ಹಾನಿ ವಿಕ್ಷಣೆ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ ವ್ಯಂಗ್ಯವಾಡಿದ್ದಾರೆ.

ಬೈಲಹೊಂಗಲ ತಾಲೂಕಿನ ನಾಗನೂರ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ನೆರೆ ಸಂತ್ರಸ್ತರ ಸಂಕಷ್ಟ ಕೇಳಲು ಬಾರದವರು ಈಗ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಬರುತ್ತಿದ್ದಾರೆ. ಅಲ್ಲಿಗೆ ಬಂದು ಬಿರಿಯಾನಿ ತಿಂದು ಹೋಗುತ್ತಾರೆ. ಆದರೆ, ನಾವು ರೈತರ ಸಮಸ್ಯೆ ಆಲಿಕೆಗಾಗಿ ಬಂದಿದ್ದೇವೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿ ಬರೋಬ್ಬರಿ ಎರಡು ತಿಂಗಳಾಗಿದೆ. ಆಗ ರೈತರ ಜಮೀನುಗಳತ್ತ ಸುಳಿಯದ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಇಂದು ನಾವು ಬಂದಿದ್ದೇವೆ ಎಂದು ಇಲ್ಲಿಗೆ ಧಾವಿಸಿದ್ದಾರೆ. ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿಗೆ ಎನ್‌ಡಿಆರ್‌ಎಫ್ ಅನುದಾನ ನೀಡಲಾಗಿದೆ. ವಿಪತ್ತು ನಿರ್ವಹಣೆಗಾಗಿ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಅನುದಾನ ಕೊಟ್ಟಿದೆ. ಆದರೆ ರಾಜ್ಯ ಸರ್ಕಾರ ಅದನ್ನು ತನ್ನ ಉಚಿತ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.

ಕೇಂದ್ರ ಸರ್ಕಾರದಿಂದ ಈ ಹೆಚ್ಚುವರಿ ಅನುದಾನ ನೀಡಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಹಾನಿಯ ವರದಿ ಸಲ್ಲಿಸಬೇಕಿದೆ. ಆದರೆ ವರದಿ ಸಲ್ಲಿಸದೇ ಕೇಂದ್ರ ಹಣ ಕೊಡುತ್ತಿಲ್ಲ ಎಂದು ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Home add -Advt

Related Articles

Back to top button