*ನಾಳೆ ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.25ರಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದು, ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಅ.25ರಂದು ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ, ಸಂಜೆ 4.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಕಿತ್ತೂರಿಗೆ ತೆರಳಿ ಸಂಜೆ 5.20ಕ್ಕೆ ಕಿತ್ತೂರು ಉತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ … Continue reading *ನಾಳೆ ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್*