Kannada NewsLatest

ಬೆಳಗಾವಿ: ಚಿನ್ನಾಭರಣ ಮಳಿಗೆ ಮೇಲೆ IT ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಲಕ್ಷ್ಮಿ ಪೂಜೆ ಮುಗಿಯುತ್ತಿದ್ದಂತೆ ಬೆಳಗಾವಿಯಲ್ಲಿ ಚಿನ್ನಾಭರಣ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಂಗಡಿ ಮಾಲಿಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಬೆಳಗಾವಿಯ ಖಡೇಬಜಾರ್ ನಲ್ಲಿರುವ ಪೋತದಾರ ಜ್ಯುವೆಲ್ಲರಿ ಅಂಗಡಿ ಮೇಲೆ ಐಟಿ 25 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಗಡಿ ಮಾಲೀಕರ ನಿವಾಸದ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಜೊತೆಗೆ ಅವರ ಸಹೋದರ ಸಂಬಂಧಿಗಳ ನಿವಾಸದಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.

ಐಟಿ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

Related Articles

Back to top button