Kannada NewsKarnataka NewsPolitics
*ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ಆಯೋಗವು ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡರು. ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್, ಶಾಸಕರಾದ ಪೊನ್ನಣ್ಣ, ಅಶೋಕ್ ರೈ, ಎಂಎಲ್ಸಿ ಪುಟ್ಟಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಆಯುಕ್ತ ಎಸ್ ಎ ದಯಾನಂದ್, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಡಾ ಮಹೇಶ್ವರ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್ ಮತ್ತಿತರರು ಭಾಗವಹಿಸಿದ್ದರು.