Kannada NewsKarnataka NewsNationalPolitics

*ಜುಲೈ 6ಕ್ಕೆ ಸಿಎಂ, ಡಿಸಿಎಂ ಅವರಿಂದ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರ ಭೇಟಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಜುಲೈ 6 ರಂದು ಶನಿವಾರ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಭೇಟಿ ಮಾಡಿ, ಅವರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಲಿದ್ದಾರೆ.

ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಲು ಬಯಸುವವರು ಮೊಬೈಲ್ ಸಂಖ್ಯೆ 7899116899 ಅನ್ನು ಸಂಪರ್ಕಿಸಿ, ತಮ್ಮ ಹೆಸರು, ಪಕ್ಷದಲ್ಲಿನ ಹುದ್ದೆ ವಿವರಗಳ ಸಮೇತ ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಮೊದಲ ಭೇಟಿಗೆ ಆದ್ಯತೆ ಇರಲಿದೆ.‌

Home add -Advt

ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸೀಮಿತವಾಗಿ ಏರ್ಪಡಿಸಿರುವ ಭೇಟಿ ಇದಾಗಿದ್ದು, ಶಾಸಕರು ಸೇರಿದಂತೆ ಬೇರೆ ಯಾರೂ ಆಗಮಿಸುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Back to top button