*ಅ.4ರಂದು ಬೆಳಗಾವಿಗೆ ಸಿಎಂ, ಡಿಸಿಎಂ: ವಿವಿಧ ಕಾರ್ಯಕ್ರಮದಲ್ಲಿ ಭಾಗಿ*

ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೆಳಗಾವಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನೀಯರಿಂಗ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸಮಾರಂಭವನ್ನು ಅಕ್ಟೊಬರ್, ೦೪, ೨೦೨೫ ರಂದು ಮಧ್ಯಾಹ್ನ ೦೨ ಗಂಟೆಗೆ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧಾರಾಮಯ್ಯ ಅವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಅವರುಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಲ. ಜಾರಕಿಹೊಳಿ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷೀ ಹೆಬ್ಬಾಳಕರ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕರಾದ ಆಸೀಫ್ (ರಾಜು) ಸೇಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ ೨ ನವದೆಹಲಿ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ ಮತ್ತು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರುಗಳು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ.
ರಾಜ್ಯ ಸಭೆ ಸಂಸದರಾದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕ ಸಭಾ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಜಿಲ್ಲಾ ಲೋಕ ಸಭಾ ಸಂಸದರಾದ ಜಗದೀಶ್ ಶೆಟ್ಟರ, ಉತ್ತರ ಕನ್ನಡ ಲೋಕ ಸಭಾ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜನಪ್ರತಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ .
ಅದೇ ದಿನ ನಗರ ಬಸ್ ನಿಲ್ದಾಣ ಉದ್ಘಾಟನೆ ಸಹ ನಡೆಯುವ ಸಾಧ್ಯತೆ ಇದೆ.